ರಾಷ್ಟ್ರೀಯ

ಮರಕ್ಕೆ ಬಸ್ ಡಿಕ್ಕಿ ಹೊಡೆದು 14 ಮಂದಿ ಪ್ರಯಾಣಿಕರ ಸಾವು

Pinterest LinkedIn Tumblr

Bus-Accident

ಬೆಹ್ರಾಮ್(ಪಂಜಾಬ್), ಜೂ.13: ಬೆಹ್ರಾಂ ಬಳಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 14 ಜನ ಪ್ರಯಾಣಿಕರು ಸ್ಥಳದಲ್ಲೇ ಬಲಿಯಾಗಿ ಇತರ 20 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಪ್ರಯಾಣಿಕರಿದ್ದ ಖಾಸಗಿ ಬಸ್ ವೇಗವಾಗಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನುಗ್ಗಿದೆ. ಎದುರಿಗಿದ್ದ ಮರಕ್ಕೆ ರಭಸದಿಂದ ಗುದ್ದಿದಾಗ 14 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತರ 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸ್ನೇಹದೀಪ್ ಶರ್ಮಾ ತಿಳಿಸಿದ್ದಾರೆ.

ಈ ನತದೃಷ್ಟ ಬಸ್ ನವಮ್‌ಶಹರ್‌ನಿಂದ ಜಾಲಂಧರ್‌ಗೆ ತೆರಳುತ್ತಿತ್ತು. ಬಸ್ ಅತ್ಯಂತ ಇಕ್ಕಟ್ಟಾದ ತಿರುವಿನಲ್ಲಿ ಹೋಗುತ್ತಿದ್ದಾಗ ಸ್ಕಿಡ್ ಆಗಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Write A Comment