ಮಸ್ಸೂರಿ: ಮಸ್ಸೂರಿನ ಐಎಎಸ್ ಅಕಾಡೆಮಿ ಆವರಣದಲ್ಲಿ ಐಟಿಬಿಪಿ ಯೋಧನೊಬ್ಬ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಉತ್ತರಖಂಡ್ ನ ಮಸ್ಸೂರಿಯ ಪ್ರತಿಷ್ಠಿತ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಅಕಾಡೆಮಿ ಐಎಎಸ್ ತರಭೇತಿ ಕೇಂದ್ರದಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ಯೋಧನೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದ್ದು, ಈ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಮತ್ತೊರ್ವನಿಗೆ ಗಂಭೀರ ಗಾಯಗಳಾಗಿವೆ.