ನವದೆಹಲಿ: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‍ರ ಕೊರಳಿಗೆ ಸುತ್ತಿ ಕೊಂಡಿರುವ ವ್ಯಾಪಂ ಹಗರಣದ ಉರುಳು ದಿನೇ ದಿನೇ ಬಿಗಿಯಾಗುತ್ತಿರುವ ಬೆನ್ನಲ್ಲೇ, ಶಿವರಾಜ್‌ಸಿಂಗ್ ಚೌಹಾಣ್ ಅವರು ಪ್ರಧಾನಿ ನರೇಂದ್ರಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಸೃಷ್ಟಿಸಿದೆ.
ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವ್ಯಾಪಂ ಹಗರಣ ಪ್ರತಿಧ್ವನಿಸಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌವ್ಹಾಣ್ ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದು ಕೋಲಾಹಲ ಸೃಷ್ಟಿಸುತ್ತಿದ್ದರೂ, ಇತ್ತ ಚೌಹಾಣ್ ಅವರು ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಚೌವ್ಹಾಣ್ ನೇತೃತ್ವದ ಯೋಜನಾ ಆಯೋಗದ ಉಪ-ಸಮಿತಿ ಸಭೆ ಚರ್ಚೆಗೆ ಆಗಮಿಸುತ್ತಿದ್ದು, ಇದೇ ಸಂದರ್ಭದಲ್ಲಿ ಮುಖ್ಯವಾಗಿ ವ್ಯಾಪಂ ಹಗರಣ ಹಾಗೂ ಆರೋಪಿ ಬಿಜೆಪಿ ನಾಯಕರ ಪಾತ್ರದ ಕುರಿತು ಚರ್ಚಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಧ್ಯಪ್ರದೇಶದ ಸಂಪುಟ ವಿಸ್ತರಣೆ ಕುರಿತಂತೆಯೂ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.