ಬೆಂಗಳೂರು: ಇಂದಿರಾನಗರದ ಖಾಸಗಿ ಶಾಲೆಯಲ್ಲಿ ಮೂರು ವರ್ಷದ ಬಾಲಕಿ ಮೇಲೆ ಭದ್ರತಾ ಸಿಬ್ಬಂದಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಸೋಮವಾರ ನಡೆದಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಬಾಲಕಿ ಮನೆಗೆ ಅಳುತ್ತಾ ಬಂದಳು. ಪೋಷಕರು ಏನಾಯಿತೆಂದು ವಿಚಾರಿಸಿದಾಗ, ಅಂಗಾಗಗಳಲ್ಲಿ ನೋವಿರುವುದನ್ನು ತಿಳಿಸಿದ ಮೇಲೆ ವಿಷಯ ತಿಳಿದ ಪೋಷಕರು ಪೊಲೀಸರಿಗೆ ತಿಳಿಸಿದ್ದಾರೆ.
ಘಟನೆ ಎಲ್ಲಿ ನಡೆದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬಾಲಕಿಯನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಂಗಳವಾರ ವರದಿ ಸಿಗಲಿದೆ ಎಂದು ಪೊಲೀಸರು ತಿಳಿಸಿದರು. ಘಟನೆ ಸಂಬಂಧ ಇಂದಿರಾನಗರ ಠಾಣೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ (ಪೊಕ್ಸೊ) ಪ್ರಕರಣ ದಾಖಲಾಗಿದೆ.