2014ರ ಲೋಕಸಭಾ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಯೊಂದು ಚುನಾವಣಾ ಆಯೋಗದ ಮೇಟ್ಟಿಲೇರಿದ್ದು ಪ್ರಧಾನಿ ಮೋದಿ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಖರ್ಚು -ವೆಚ್ಚದ ಕುರಿತಾಗಿ ಅಸಮರ್ಪಕ ಲೆಕ್ಕ ನೀಡಿದ್ದಾರೆಂದು ಆಪಾದಿಸಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಸಂಸತ್ ಸದಸ್ಯರೊಬ್ಬರು ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಬುಧವಾರ ಭಾರತದ ಚುನಾವಣಾ ಆಯೋಗಕ್ಕೆ ವಹಿಸಿದೆ.
ಅಲ್ಲದೇ ಈ ಅರ್ಜಿಯನ್ನು ಇತ್ಯರ್ಥಗೊಳಿಸಿದ ಹೈಕೋರ್ಟ್, ವಿಷಯ ಈಗಾಗಲೇ ಚುನಾವಣಾ ಆಯೋಗದ ಮುಂದೆ ಇರುವುದರಿಂದ ಅಲ್ಲೇ ಅದು ಇತ್ಯರ್ಥವಾಗುವುದು ಸೂಕ್ತ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿತು.