ರಾಷ್ಟ್ರೀಯ

ರಾಷ್ಟ್ರಪತಿ ಪ್ರಣಬ್ ಪತ್ನಿ ಸ್ಥಿತಿ ಗಂಭೀರ

Pinterest LinkedIn Tumblr

Pranab-Mukherjee-wife

ಹೊಸದಿಲ್ಲಿ: ಅನಾರೋಗ್ಯದಿಂದ ಇಲ್ಲಿನ ಆರ್ಮಿ ಆಸ್ಪತ್ರೆಗೆ ದಾಖಲಾಗಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪತ್ನಿ ಸ್ಥಿತಿ ಗಂಭೀರವಾಗಿದೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಣಬ್ ಪತ್ನಿ ಸುವ್ರಾ ಮುಖರ್ಜಿ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಸುವ್ರಾ ಅವರು ಹೃದ್ರೋಗಿಯಾಗಿದ್ದು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ತುರ್ತು ನಿಗಾ ಘಟಕದಲ್ಲಿ ಅವರನ್ನು ಇರಿಸಲಾಗಿದ್ದು, ಆರೋಗ್ಯವನ್ನು ಪರಿಶೀಲಿಸಲಾಗುತ್ತಿದೆ,’ ಎಂದು ಆಸ್ಪತ್ರೆ ವಕ್ತಾರರು ತಿಳಿಸಿದ್ದಾರೆ.

Write A Comment