ದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂಬ ಆಘಾತಕಾರಿ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದ್ದು ಆತಂಕಕ್ಕೆ ಕಾರಣವಾಗಿದೆ.
ಯಾಕುಬ್ ಮೆನನ್ ಗೆ ಗಲ್ಲು ವಿಧಿಸಿರುವುದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಪಾಕಿಸ್ತಾನ ಮೂಲದ ಸಿಮಿ, ಇಂಡಿಯನ್ ಮುಜಾಹಿದ್ದೀನ್, ಜೈಷ್-ಇ-ಮೊಹಮ್ಮದ್, ತೆಹರಿಕ್-ಇ-ಫ್ರುಕಾನ್, ಲಷ್ಕರ್-ಇ-ತೊಯ್ಬಾ, ಪಸ್ಬನ್-ಇ-ಅಹಲೆ, ಹಾದಿಸ್ ಸೇರಿದಂತೆ ಕೆಲ ಸಂಘಟನೆಗಳು ಒಟ್ಟಾಗಿ ದಾಳಿ ನಡೆಸಲು ಸಂಚು ರೂಪಿಸಿವೆ ಎನ್ನಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಭಾರೀ ಬಿಗಿ ಭದ್ರತೆ ಕಲ್ಪಿಸುವಂತೆ ಸೂಚನೆ ನೀಡಿದೆ.
ದೇಶದ ಮಹಾನಗರಗಳಾದ ದೆಹಲಿ, ಮುಂಬೈ, ಬೆಂಗಳೂರು, ಅಹಮದಾಬಾದ್, ಚೆನ್ನೈ, ಕೋಲ್ಕತ್ತಾ, ಶ್ರೀನಗರ ಗಳು ಉಗ್ರರ ಹಿಟ್ ಲೀಸ್ಟ್ ನಲ್ಲಿ ಇವೆ ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ಸ್ವತಂತ್ರ್ಯ ದಿನಾಚರಣೆ ನಡೆಯುವ ಸ್ಥಳಗಳಲ್ಲಿ ಹದ್ದಿನ ಕಣ್ಣಿಡುವಂತೆ ಗೃಹ ಇಲಾಖೆ ಸೂಚನೆ ಕೊಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.