ಶ್ರೀನಗರ(ಐಎಎನ್ ಎಸ್): ಪ್ರತ್ಯೇಕವಾದಿಗಳು ಶ್ರೀನಗರದಲ್ಲಿ ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆ ನಡೆಸದಂತೆ ನಿರ್ಬಂಧ ಹೇರಲಾಗಿದ್ದು, ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
ಆ.14 ಪಾಕಿಸ್ತಾನದ ಸ್ವಾತಂತ್ರ್ಯ ದಿನವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಏಳು ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹುರಿಯತ್ ಸಂಘಟನೆಯ ಮುಖಂಡರೊಬ್ಬರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ರಾಷ್ಟ್ರವಿರೋಧಿ ಚಟುವಟಿಕೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಜಮ್ಮು ಕಾಶ್ಮೀರ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ಮೂಲಗಳು ತಿಳಿಸಿವೆ.