ವೇಶ್ಯಾವಾಟಿಕೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ನಟಿಯೊಬ್ಬಳು ವಿಚಾರಣೆಯ ಸಮಯದಲ್ಲಿ ನ್ಯಾಯಾಧೀಶರೆದುರು ಬೆತ್ತಲೆಯಾಗಿ ನಿಂತ ಘಟನೆಯೊಂದು ನಡೆದಿದೆ.
ಹೌದು. ಫ್ಲೋರಿಡಾದಲ್ಲಿ ಈ ಘಟನೆ ನಡೆದಿದ್ದು ನೀಲಿ ಚಿತ್ರದ ನಟಿಯಾಗಿರುವ 54 ವರ್ಷದ ಸುಸಾನ್ ಸುರೆಟ್ಟೆ ಎಂಬಾಕೆ ಸಾರ್ವಜನಿಕ ಸ್ಥಳಗಳಲ್ಲಿ ವ್ಯಾಭಿಚಾರ ನಡೆಸುತ್ತಿದ್ದಾಳೆ ಎಂಬ ಆರೋಪದ ಮೇಲೆ ಪೊಲೀಸರು ಆಕೆಯನ್ನು ಬಂಧಿಸಿ ಬ್ರೋವಾರ್ಡ್ ಕೌಂಟಿ ಕೋರ್ಟ್ ಗೆ ಹಾಜರು ಪಡಿಸಿದ್ದರು.
ವಿಚಾರಣೆ ಆರಂಭವಾಗುತ್ತಲೇ ಈ ಇದ್ದಕ್ಕಿದ್ದಂತೆ ನ್ಯಾಯಾಧೀಶರ ಎದುರು ನಟಿ ತನ್ನ ಬಟ್ಟೆಯನ್ನು ಬಿಚ್ಚಿ ಪೊಲೀಸರು ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತನಗಾಗಿದ್ದ ಗಾಯವನ್ನು ಪ್ರದರ್ಶಿಸಿದ್ದಾಳೆ. ಇದರಿಂದ ಕಕ್ಕಾಬಿಕ್ಕಿಯಾದ ನ್ಯಾಯಾಧೀಶರು ನಿಮ್ಮ ಮಾನಸಿಕ ಸ್ಥಿತಿ ಹೇಗಿದೆ ಎಂದು ಪ್ರಶ್ನಿಸಿದ್ದು ಆಕೆ ತನ್ನ ಮಾನಸಿಕ ಸ್ಥಿತಿ ಉತ್ತಮವಾಗಿದೆ ಎಂದು ತಿಳಿಸಿದ್ದು, ಆದರೂ ಸಹ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಆರೋಗ್ಯದ ವರದಿಯನ್ನು ತರುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ.