ಚೆನ್ನೈ: ಚೆನ್ನೈ ಲೋಕಲ್ ರೈಲೊಂದರ ಎರಡು ಬೋಗಿಗಳಲ್ಲಿ ಇಂದು ಮುಂಜಾನೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕೆಲ ಕಾಲ ಆತಂಕ ವಾತಾವರಣ ನಿರ್ಮಾಣವಾಗಿತ್ತು.
ಇಂದು ಬೆಳಗ್ಗೆ 8.30ಕ್ಕೆ ಈ ಘಟನೆ ನಡೆದಿದ್ದು ವೇಲಚೇರಿಯಿಂದ ಚೆನ್ನೈ ಬೀಚ್ ಕಡೆಗೆ ಸಾಗುತ್ತಿದ್ದ 11 ಬೋಗಿಗಳ ರೈಲಿಗೆ ಪೆರುಂಗಡಿ ನಿಲ್ದಾಣದ ಬಳಿ ಬರುತ್ತಿದ್ದಂತೆ ಅಚಾನಕ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಒಬ್ಬ ಪ್ರಯಾಣಿಕರಿಗೆ ಗಾಯವಾದ ಬಗ್ಗೆ ವರದಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸುದ್ದಿಮೂಲಗಳ ಪ್ರಕಾರ ಒಬ್ಬ ರೈಲ್ವೆ ನೌಕರರು ದಟ್ಟ ಹೊಗೆಯನ್ನು ಸೇವಿಸಿದ ಕಾರಣ ಅಸ್ವಸ್ಥರಾಗಿದ್ದರಿಂದ ಅವರನ್ನು ತಕ್ಷಣಕ್ಕೆ ಆಸ್ಪತ್ರೆಗೆ ಸಾಗಿಸಲಾಯಿತು.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿತು ಎನ್ನಲಾಗಿದೆ. ಎರಡು ಬೋಗಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಹೀಗಾಗಿ ಕೆಲ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯವಾಗಿತ್ತು.