ರಾಷ್ಟ್ರೀಯ

ಕಚ್ಚಾತೈಲ ದರದಲ್ಲಿ ಭಾರೀ ಇಳಿಕೆ ಹಿನ್ನೆಲೆಯಲ್ಲಿ ಪೆಟ್ರೋಲ್ ದರದಲ್ಲಿ 4 ರೂ ಇಳಿಕೆ ಸಾಧ್ಯತೆ..?

Pinterest LinkedIn Tumblr

petrol-price-hiked

ನವದೆಹಲಿ: ಡಿ.14: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರೀ ಇಳಿಕೆಯಾದ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆಯಲ್ಲಿ ಭಾರಿ ಇಳಿಕೆಯಾಗುವ ಸಾಧ್ಯತೆಗಳಿದ್ದು ಪ್ರತಿ ಲೀಟರ್ ಗೆ 4 ರೂ. ಇಳಿಕೆಯಾಗುವ ಸಾಧ್ಯತೆಯಿದೆ.

ಪ್ರತಿ ಬ್ಯಾರೆಲ್ ಗೆ ಕಚ್ಚಾ ತೈಲ ಬೆಲೆ 35 ಡಾಲರ್ ತಲುಪಿದ್ದು, ಕಳೆದ 15 ದಿನಗಳಲ್ಲಿ ಕಚ್ಚಾ ತೈಲಗಳ ಬೆಲೆಯಲ್ಲಿ ಶೇ. 11 ರಷ್ಟು ಕಡಿಮೆಯಾಗಿದೆ. ಕಳೆದ 11 ವರ್ಷದಲ್ಲಿ ತೈಲ ಬೆಲೆ ಕನಿಷ್ಟ ಮಟ್ಟಕ್ಕೆ ತಲುಪಿದೆ. ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ಭಾರತೀಯ ಕಂಪೆನಿಗಳು ಪೆಟ್ರೋಲ್ ಬೆಲೆಯಲ್ಲಿ ಇಳಿಕೆ ಮಾಡುವ ಸಾಧ್ಯತೆ ಇದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ನೋಡಿಕೊಂಡು ಪ್ರತಿ 15 ದಿನಗಳಿಗೊಮ್ಮೆ ಭಾರತೀಯ ತೈಲ ಕಂಪೆನಿಗಳು ದರವನ್ನು ಪರಿಷ್ಕರಿಸುತ್ತಿರುತ್ತವೆ.

Write A Comment