ರಾಷ್ಟ್ರೀಯ

ಲೋಕಸಭೆಯಲ್ಲಿ ಪ್ರತಿಭಟನಾ ನಿರತ ಎಎಪಿ ಸಂಸದನಿಗೆ ನೀರು ನೀಡಿದ ಮೋದಿ

Pinterest LinkedIn Tumblr

modi

ನವದೆಹಲಿ: ದೆಹಲಿ ಮುಖ್ಯಮಂತ್ರಿಯವರ ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ದೂರಿ ಈ ಕ್ರಮದ ವಿರುದ್ಧ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಎಪಿ ಸಂಸದ ಭಾಗವಂತ್ ಮನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಲೋಟ ನೀರು ನೀಡಲು ಮುಂದಾಗಿದ್ದು ವಿಶೇಷವಾಗಿತ್ತು.

ಸದನದ ಬಾವಿಯಲ್ಲಿ ಇಳಿದು ಘೋಷಣೆಗಳನ್ನು ಕೂಗುತ್ತಿದ್ದ ಮನ್ ಅವರು ಬಸವಳಿದು ನೀರಿಗಾಗಿ ಹುಡುಕಾಡುತ್ತಿದ್ದಾಗ ಅಲ್ಲಿಗೆ ಆಗಮಿಸಿದ ಪ್ರಧಾನಿ ಮೋದಿ ನೀರು ನೀಡಿದ್ದಾರೆ. ಮುಗುಳ್ನಗುತ್ತಾ ಸ್ವೀಕರಿಸಿದ ಮನ್ ನೀರು ಕುಡಿದಿದ್ದಾರೆ. ಪ್ರಧಾನಿಯವರ ಈ ನಡೆಗೆ ಬಿಜೆಪಿ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದ್ದಾರೆ.

ನಂತರ ಮನ್ ಅವರು ಸರ್ಕಾರಿ ವಿರೋಧಿ ಘೋಷಣೆಗಳನ್ನು ಕೂಗುವುದನ್ನು ಮುಂದುವರೆಸಿದ್ದಾರೆ.

ಎಎಪಿ ಸದಸ್ಯರು ಮತ್ತು ಕಾಂಗ್ರೆಸ್ ಪಕ್ಷದ ಹಲವು ಸದಸ್ಯರು ಪ್ರಶ್ನೋತ್ತರ ವೇಳೆಯನ್ನು ಮುಂದೂಡುವಂತೆ ಮಾಡಿದ ಮನವಿಯನ್ನು ಸ್ಪೀಕರ್ ತಿರಸ್ಕರಿಸಿದ್ದರಿಂದ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು.

ಪ್ರಧಾನಿಯವರು ನೀರು ನೀಡಿದ ವಿಷಯವನ್ನು ತಿಳಿದ ವಿರೋಧ ಪಕ್ಷದ ನಾಯಕಿ ಸೋನಿಯಾ ಗಾಂಧಿ ಕೂಡ ಜೋರಾಗಿ ನಕ್ಕಿದ್ದು ಕಂಡುಬಂತು.

Write A Comment