ರಾಷ್ಟ್ರೀಯ

ಹಿರಿಯ ಕವಿ ಕೆ.ವಿ ತಿರುಮಲೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Pinterest LinkedIn Tumblr

thirumal

ಬೆಂಗಳೂರು: ಕನ್ನಡದ ಹಿರಿಯ ಕವಿ, ವಿಮರ್ಶಕ, ಕಾದಂಬರಿಕಾರ ಕೆ.ವಿ.ತಿರುಮಲೇಶ್‌ ಅವರು 2015ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ತಿರುಮಲೇಶ್‌ ಅವರ ‘ಅಕ್ಷಯ ಕಾವ್ಯ’ ಕೃತಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಶಸ್ತಿ 1 ಲಕ್ಷ ರುಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

‘ಅಕ್ಷಯ ಕಾವ್ಯ’ ತಿರುಮಲೇಶ್‌ ಅವರ ಮಹತ್ವಾಕಾಂಕ್ಷೆಯ ಕೃತಿಯಾಗಿದ್ದು, ಇದು ‘ಆಧುನಿಕ ಮಹಾಕಾವ್ಯ’ದ ವಿಸ್ತಾರವನ್ನು ಒಳಗೊಂಡಿದೆ. ಲೋಕದ ಅನುಭವಗಳನ್ನು ಗಂಡು ಹೆಣ್ಣಿನ ರೂಪಕಗಳ ಮೂಲಕ ಗ್ರಹಿಸುವ ಪ್ರಯತ್ನ ಹಾಗೂ ಬೇರೆ ಬೇರೆ ಲಯಗಳು ಬಳಕೆಯಾಗಿರುವ ವಿಶಿಷ್ಟ ಕಾವ್ಯಪ್ರಯೋಗ ಇದಾಗಿದೆ.

೧೯೪೦ರಲ್ಲಿ ಕಾಸರಗೋಡು ಜಿಲ್ಲೆಯ ಕಾರಡ್ಕ ಎಂಬ ಗ್ರಾಮದಲ್ಲಿ ಜನಿಸಿದ ಕೆ ವಿ ತಿರುಮಲೇಶ್ ಅವರು ಕನ್ನಡದ ಪ್ರಮುಖ ಕವಿ ಮತ್ತು ವಿಮರ್ಶಕರಲ್ಲೊಬ್ಬರು.

Write A Comment