ರಾಯ್‌ಪುರ, ಡಿ.26-ಛತ್ತೀಸಗಢ ದಾಂತೇವಾಡ ಜಿಲ್ಲೆಯಲ್ಲಿ ನಾಲ್ವರು ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕ್ಸಲರ ಹಾವಳಿಯಿಂದ ಜರ್ಝರಿತಗೊಂಡಿರುವ ದಾಂತೇವಾಡ ಜಿಲ್ಲೆಯ ಭನ್ಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕ್ಸಲರ ಸಂಚಾರ ನಡೆದಿರುವ ಬಗ್ಗೆ ಮಾಹಿತಿ ಪಡೆದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾಮ್‌ಲೋಚನ್ ಕಶ್ಯಪ್ ತಿಳಿಸಿದ್ದಾರೆ.