ರಾಷ್ಟ್ರೀಯ

ಡಿಡಿಸಿಎಯಿಂದ ಕೇಜ್ರಿವಾಲ್, ಆಜಾದ್ ವಿರುದ್ಧ ಮಾನನಷ್ಟ ಮೊಕದ್ದಮೆ

Pinterest LinkedIn Tumblr

arvind-15ನವದೆಹಲಿ: ಕ್ರಿಕೆಟ್ ಸಂಸ್ಥೆಯ ವಿರುದ್ಧ ಆಧಾರ ರಹಿತ ಆರೋಪ ಮಾಡಿದ್ದಕ್ಕಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಅಮಾನತುಗೊಂಡ ಬಿಜೆಪಿ ಸಂಸದ ಕೀರ್ತಿ ಆಜಾದ್ ಮತ್ತು ಇತರೆ ಎಎಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ದೆಹಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ) ನಿರ್ಧರಿಸಿದೆ.

ಕೇಜ್ರಿವಾಲ್ ಹಾಗೂ ಆಜಾದ್ ಮಾಡಿರುವ ಆರೋಪಗಳನ್ನು ತೀವ್ರವಾಗಿ ಖಂಡಿಸಿರುವ ಡಿಡಿಸಿಎ, ಸಂಸ್ಥೆಯ ಗೌರವಕ್ಕೆ ಧಕ್ಕೆಯಾಗಲಿದೆ ಎಂದಿದೆ.

ಈ ಸಂಬಂಧ ಇಂದು ಡಿಡಿಸಿಎ ಹಿರಿಯ ಅಧಿಕಾರಿಗಳೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕಾರಿ ಅಧ್ಯಕ್ಷ ಚೇತನ್ ಚೌಹಾಣ್ ಅವರು, ರಾಜ್ಯ ಕ್ರಿಕೆಟ್ ಸಂಸ್ಥೆಯ ಮೇಲೆ ಹಲವು ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ ಮತ್ತು ತಪ್ಪು ಮಾಹಿತಿ ನೀಡುತ್ತಿರುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಡಿಡಿಸಿಎ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಹೀಗಾಗಿ ದೆಹಲಿ ಸರ್ಕಾರದಿಂದ ಹೊಸ ತನಿಖೆಯ ಅಗತ್ಯ ಇಲ್ಲ ಎಂದು ಚೌಹಾಣ್ ಹೇಳಿದರು.

ಡಿಡಿಸಿಎ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ಅರವಿಂದ್ ಕೇಜ್ರಿವಾಲ್, ಆಜಾದ್ ಹಾಗೂ ಇತರೆ ಎಎಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ಡಿಡಿಸಿಎ ಖಜಾಂಚಿ ರವೀಂದ್ರ ಮಂಚಂದ ಅವರು ತಿಳಿಸಿದರು.

Write A Comment