ರಾಷ್ಟ್ರೀಯ

ಪಾಕಿಸ್ತಾನಕ್ಕೆ ಮೋದಿ ಭೇಟಿ ನೀಡಿದ್ದರಲ್ಲಿ ತಪ್ಪಿಲ್ಲ: ನಿತೀಶ್ ಕುಮಾರ್

Pinterest LinkedIn Tumblr

nitish-kumarಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ಮೋದಿ ಪಾಕಿಸ್ತಾನಕ್ಕೆ ಭೇಟಿ ದ್ದರಲ್ಲಿ ತಪ್ಪಿಲ್ಲ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಆದರೆ ಪಾಕ್ ಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದ ದಿನ ಪ್ರತಿಕ್ರಿಯೆ ನೀಡಿದ್ದ ಜೆಡಿಯು ನಾಯಕ ಕೆಸಿ ತ್ಯಾಗಿ, ಪ್ರಧಾನಿ ಮೋದಿ ಅವರ ನಡೆ ಅಚ್ಚರಿ ಮೂಡಿಸಿತ್ತು ಎಂದು ಹೇಳಿದ್ದರು.

ಡಿ.25 ರಂದು ಪಾಕ್ ಗೆ ಪ್ರಧಾನಿ ಮೋದಿ ದಿಢೀರ್ ಭೇಟಿ ನೀಡಿದ್ದನ್ನು ವಿರೋಧಿಸಿದ್ದ ಪಕ್ಷಗಳ ಪೈಕಿ ನಿತೀಶ್ ಕುಮಾರ್ ಅವರ ಜೆಡಿಯು ಸಹ ಗುರುತಿಸಿಕೊಂಡಿತ್ತು. ಆದರೆ ಜೆಡಿಯು ನಾಯಕ ನಿತೀಶ್ ಕುಮಾರ್ ಮಾತ್ರ ಮೋದಿ ಅವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಜೆಡಿಯು ನಾಯಕ ನಿತೀಶ್ ಕುಮಾರ್ ಮೋದಿ ನಡೆಯನ್ನು ಸಮರ್ಥಿಸಿಕೊಂಡಿದ್ದರೆ, ಇತ್ತ ಜೆಡಿಯು ಮಿತ್ರ ಪಕ್ಷ ಆರ್.ಜೆ.ಡಿ ಮುಖಂಡ ಲಾಲು ಪ್ರಸಾದ್ ಯಾದವ್ ಮಾತ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದನ್ನು ವಿರೋಧಿಸಿದ್ದು, ಮೋದಿ ಆಡಳಿತದಲ್ಲಿ ದೇಶ ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ.

Write A Comment