ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಯುರೋಪ್ ಪ್ರವಾಸದಿಂದ ದೆಹಲಿಗೆ ವಾಪಸ್ ಆಗುವ ಮೂಲಕ ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆದಿದ್ದಾರೆ.
ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ವಾಪಸ್ ಬರುತ್ತಿದ್ದಂತೆ ಪಕ್ಷದ ಅಧ್ಯಕ್ಷ ಗಾದಿಗೇರುವ ಸಿದ್ಧತೆ ನಡೆಸಿದ್ದು, ಸದ್ಯದಲ್ಲೇ ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಪುನಾರಚನೆಯಾಗಲಿದೆ.
ರಾಹುಲ್ ಗಾಂಧಿ ಅವರು ಕಳೆದ ವರ್ಷ ಡಿಸೆಂಬರ್ 28ರಂದು ಯುರೋಪ್ ಪ್ರವಾಸಕ್ಕೆ ತೆರಳುವುದಾಗಿ ಟ್ವಿಟರ್ ಮೂಲಕ ತಿಳಿಸಿದ್ದರು. ಇದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಅಲ್ಲದೆ ರಾಹುಲ್ ಗಾಂಧಿ ಅವರು ಯುರೋಪ್ ಪ್ರವಾಸದಿಂದ ಮರಳಿದ ಬಳಿಕ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಅಲ್ಲಿ ಪಕ್ಷದ ಅಧ್ಯಕ್ಷ ಹುದ್ದೆಯನ್ನು ಸೋನಿಯಾ ಗಾಂಧಿ ಅವರಿಂದ ರಾಹುಲ್ ಗಾಂಧಿ ಅವರಿಗೆ ವರ್ಗಾಯಿಸುವ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು.
‘ನಾನು ಕೆಲವು ದಿನಗಳ ಮಟ್ಟಿಗೆ ಯುರೋಪ್ ಪ್ರವಾಸ ಹೋಗುತ್ತಿದ್ದೇನೆ; ಎಲ್ಲರಿಗೂ ಹೊಸ ವರ್ಷದ ಶುಭಾಶಯ’; ಎಂದು ವಿದೇಶ ಪ್ರವಾಸಕ್ಕೆ ತೆರಳುವ ಮುನ್ನ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರು.