ಘಜಿಯಾಬಾದ್: 6 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 60 ವರ್ಷದ ವೃದ್ಧನೊಬ್ಬ ನಿರಂತರವಾಗಿ ಅತ್ಯಾಚಾರ ಮಾಡಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.
ನೊಯ್ಡಾದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ದಂಪತಿಗಳು ಮಗವನ್ನು ಶಿಶುಪಾಲನಾ ಶಾಲೆಯೊಂದಕ್ಕೆ ಸೇರಿಸಿದ್ದರು. ಬಾಲಕಿ ಕಳೆದ ನಾಲ್ಕು ತಿಂಗಳಿಂದಲೂ ಶಾಲೆಗೆ ಕಳುಹಿಸಲಾಗುತ್ತಿತ್ತು. ಬಾಲಕಿಯನ್ನು ಶಾಲೆಯಲ್ಲಿದ್ದ 60 ವರ್ಷದ ವೃದ್ಧನೋರ್ವ ನೋಡಿಕೊಳ್ಳುತ್ತಿದ್ದನು. ಬಾಲಕಿಯನ್ನು ನೋಡಿಕೊಳ್ಳುವ ನೆಪದಲ್ಲಿ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದ ಎಂದು ಹೇಳಲಾಗುತ್ತಿದೆ.
ಕಳೆದ ಕೆಲವು ದಿನಗಳಿಂದೀಗೆ ಬಾಲಕಿ ವೃದ್ಧನ ನಡವಳಿಕೆ ಕುರಿತಂತೆ ತನ್ನ ತಾಯಿ ಬಳಿ ಹೇಳಿಕೊಂಡಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ಧೃಢವಾಗಿದೆ ಎಂದು ವರದಿಗಳು ತಿಳಿಸಿವೆ. ವೃದ್ಧನ ವಿರುದ್ಧ ಇದೀಗ ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) 377 (ಅಸ್ವಾಭಾವಿಕ ಲೈಂಗಿಕ ಅಪರಾಧ)ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ವೃದ್ಧನನ್ನು ಬಂಧನಕ್ಕೊಳಪಡಿಸಿದ್ದಾರೆ.