ರಾಷ್ಟ್ರೀಯ

ಅರುಣಾಚಲದಲ್ಲಿ ರಾಷ್ಟ್ರಪತಿ ಆಡಳಿತ, ಕೇಂದ್ರಸಂಪುಟ ಶಿಫಾರಸು

Pinterest LinkedIn Tumblr

arunaನವದೆಹಲಿ: ಈಶಾನ್ಯ ರಾಜ್ಯಗಳ ಮಹತ್ವದ ರಾಜ್ಯ ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲು ಕೇಂದ್ರ ಸಚಿವ ಸಂಪುಟ ಶಿಫಾರಸು ಮಾಡಿದ್ದು, ರಾಷ್ಟ್ರಪತಿಯವರ ಅಂಕಿತಕ್ಕಾಗಿ ಕಳುಹಿಸಲಾಗಿದೆ.

ಭಾನುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಅರುಣಾಚಲ ಪ್ರದೇಶದಲ್ಲಿ ರಾಜಕೀಯ ಅಸ್ಥಿರತೆ ಸೃಷ್ಟಿಯಾಗಿರುವುದರಿಂದ ಸುಗಮ ಆಡಳಿತಕ್ಕಾಗಿ ಕೇಂದ್ರ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ. ಅರುಣಾಚಲ ಪ್ರದೇಶದ ಶಾಸಕರು ಸಂವಿಧಾನ ಬಾಹಿರವಾಗಿ ಕೆಲವೊಂದು ನಿರ್ಣಯಗಳನ್ನು ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗುತ್ತಿದೆ.

ಈ ಮಧ್ಯೆ ರಾಷ್ಟ್ರಪತಿ ಆಡಳಿತ ಶಿಫಾರಸ್ಸಿಗೆ ರಾಷ್ಟ್ರಪತಿಯವರು ಅಂಕಿತ ಹಾಕಿದಲ್ಲಿ ಕೇಂದ್ರ ಸಂಪುಟದ ಕ್ರಮವನ್ನು ಕೋರ್ಟಿನಲ್ಲಿ ಪ್ರಶ್ನಿಸುವುದಾಗಿ ಕಾಂಗ್ರೆಸ್ ಸವಾಲು ಹಾಕಿದೆ.

Write A Comment