ರಾಷ್ಟ್ರೀಯ

ಜೆಎನ್‌ಯು ಕುಲಪತಿಗೆ ದೆಹಲಿ ಪೊಲೀಸರ ಪತ್ರ

Pinterest LinkedIn Tumblr

JNNNNNನವದೆಹಲಿ (ಏಜೆನ್ಸೀಸ್‌): ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಆರು ಮಂದಿ ವಿದ್ಯಾರ್ಥಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಕುಲಪತಿಗೆ ದೆಹಲಿ ಪೊಲೀಸರು ಪತ್ರ ಬರೆದಿದ್ದಾರೆ.

ಸಂಸತ್‌ ದಾಳಿ ಅಪರಾಧಿ ಅಫ್ಜಲ್‌ ಗುರುವನ್ನು ಗಲ್ಲಿಗೇರಿಸಿದ್ದನ್ನು ವಿರೋಧಿಸಿ ವಿಶ್ವವಿದ್ಯಾಲಯದ ಕೆಲ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿದ್ದರು.

ಕಾರ್ಯಕ್ರಮ ನಡೆಸಿದ ಆರೋಪದಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ ಎಂಬವರನ್ನು ಬಂಧಿಸಲಾಗಿದೆ. ರಾಷ್ಟ್ರದ್ರೋಹ ಮತ್ತು ಅಪರಾಧ ಒಳಸಂಚು ಆರೋಪಗಳನ್ನು ಅವರ ವಿರುದ್ಧ ಹೊರಿಸಲಾಗಿದೆ.

ಪ್ರತಿಭಟನೆ: ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ ಬಂಧನ ವಿರೋಧಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿವೆ.

Write A Comment