ರಾಷ್ಟ್ರೀಯ

ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಐವರು ಉಗ್ರರ ಹತ್ಯೆ

Pinterest LinkedIn Tumblr

Kupwarawebಶ್ರೀನಗರ (ಪಿಟಿಐ): ಜಮ್ಮು–ಕಾಶ್ಮೀರದ ಕಪ್ವಾರ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಸಿಬ್ಬಂದಿ ಐವರು ಉಗ್ರರನ್ನು ಹೊಡೆದುರುಳಿಸಿದೆ. ಘಟನೆಯಲ್ಲಿ ಇಬ್ಬರು ಯೋಧರು ಮೃತಪಟ್ಟಿದ್ದಾರೆ.

ಕುಪ್ವಾರ ಜಿಲ್ಲೆಯ ಚೌಕಿಬಾಲ್‌ನಲ್ಲಿ ಗುಂಡಿನ ಕಾಳಗ ನಡೆದಿದೆ ಎಂದು ಸೇನಾ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಚೌಕಿಬಾಲ್‌ನ ಮರ್ಸೆರಿ ಗ್ರಾಮದ ಮನೆಯೊಂದರಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಲಭಿಸಿತು. ಇದನ್ನು ಆಧರಿಸಿ ಶುಕ್ರವಾರ ಸಂಜೆ ಭದ್ರತಾ ಪಡೆ ಕಾರ್ಯಾಚರಣೆಗೆ ಇಳಿಯಿತು. ಗುಂಡಿನ ಚಕಮಕಿಯಲ್ಲಿ ಐವರು ಉಗ್ರರನ್ನು ಕೊಲ್ಲಲಾಗಿದೆ. ಶನಿವಾರ ಮಧ್ಯಾಹ್ನವೂ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

Write A Comment