ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಜವಾಹರ್‍ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‍ಯು)ಕ್ಕೆ ಭೇಟಿ ನೀಡಿ, ಅಲ್ಲಿ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಅವರ ಬಂಧನ ವಿರೋಧಿಸಿ ವಿದ್ಯಾರ್ಥಿ ಸಂಘ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಈ ವೇಳೆ ಎಬಿವಿಪಿ ಕಾರ್ಯಕರ್ತರು ರಾಹುಲ್ ಗಾಂಧಿಗೆ ಕಪ್ಪು ಭಾವುಟ ಪ್ರರ್ದಶಿಸಿ, ಗೋ ಬ್ಯಾಕ್ ರಾಹುಲ್ ಗಾಂಧಿ ಎಂದು ಘೋಷಣೆ ಕೂಗಿದರು.
ಬಳಿಕ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತ ವಿರೋಧಿ ಭಾವನೆ ಪ್ರಶ್ನಾತೀತ ಮತ್ತು ಸ್ವೀಕಾರಾರ್ಹವಲ್ಲ. ಆದರೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದು ಮತ್ತು ಚರ್ಚೆ ಮಾಡುವುದು ಪ್ರಜಾಪ್ರಭುತ್ವದ ಮೂಲ ಹಕ್ಕುಗಳು. ಮೋದಿ ಸರ್ಕಾರ ಮತ್ತು ಎಬಿವಿಪಿ ಅನಗತ್ಯವಾಗಿ ಜೆಎನ್ಯುು ಮೇಲೆ ದೋಷಾರೋಪ ಹೊರಿಸುತ್ತಿದ್ದು, ಇದು ಖಂಡನೀಯ ಎಂದು ರಾಹುಲ್ ಗಾಂಧಿ ಹೇಳಿದರು.
ರಾಹುಲ್ ಜತೆ ಕಾಂಗ್ರೆಸ್ ನಾಯಕರಾದ ಅಜಯ್ ಮಕಾನ್ ಮತ್ತು ಆನಂದ ಶರ್ಮಾ ಜೆಎನ್ಯುು ಕಾಲೇಜಿಗೆ ಭೇಟಿ ನೀಡಿದರು.
ಜೆಎನ್ಯುು ಪ್ರಕರಣದ ಕುರಿತು ತನಿಖೆ ನಡೆಸುವಂತೆ ದೆಹಲಿ ಸರ್ಕಾರ ಸ್ಥಳೀಯ ಕೋರ್ಟ್ಗೆ ಮನವಿ ಮಾಡಿದೆ. ಗಲ್ಲು ಶಿಕ್ಷೆಯಲ್ಲಿ ಸತ್ತ ಉಗ್ರ ಅಫ್ಜಲ್ ಹಾಗೂ ಪಾಕಿಸ್ತಾನ ಪರ ಘೊಷಣೆ ಕೂಗಿದ್ದಕ್ಕಾಗಿ ರಾಷ್ಟ್ರದ್ರೋಹ ಪ್ರಕರಣದಡಿ ಜೆಎನ್ಯುು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ನನ್ನು ಬಂಧಿಸಲಾಗಿದೆ.