ರಾಷ್ಟ್ರೀಯ

ದೇಶ ವಿರೋಧಿ ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಲುಕೌಟ್ ನೋಟಿಸ್ ಜಾರಿ

Pinterest LinkedIn Tumblr

jnu-entranceನವದೆಹಲಿ: ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಫೆ. 9ರಂದು ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎಂದು ಶಂಕಿಸಲಾಗುವ ಮೂವರು ವಿದ್ಯಾರ್ಥಿಗಳಿಗೆ ದೆಹಲಿ ಪೊಲೀಸರು ಶನಿವಾರ ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ.

ಇದೀಗ ತಲೆ ಮರೆಸಿಕೊಂಡಿರುವ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚುವುದಕ್ಕಾಗಿ ಇಮಿಗ್ರೇಷನ್ ಚೆಕ್‌ಪೋಸ್ಟ್‌ಗಳಲ್ಲಿನ ಸಂಬಂಧಿಸಿದ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಈ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚುವುದಕ್ಕಾಗಿ ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಆ ವಿದ್ಯಾರ್ಥಿಗಳ ಆಪ್ತರನ್ನು ವಿಚಾರಣೆಗೊಳಪಡಿಸಿದೆ. ಅಷ್ಟೇ ಅಲ್ಲದೆ ಈ ವಿದ್ಯಾರ್ಥಿಗಳ ಮೊಬೈಲ್ ಫೋನ್‌ನ ಕರೆಗಳ ವಿವರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಈಗಾಗಲೇ ಪೊಲೀಸರು ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನಯ್ಯಾ ಕುಮಾರ್ ಅವರನ್ನು ಬಂಧಿಸಿ ತಿಹಾರ್ ಜೈಲಿನಲ್ಲಿರಿಸಿದ್ದಾರೆ. ಈಗಾಗಲೇ ಪೊಲೀಸರು ಈ ವಿಷಯಕ್ಕೆ ಸಂಬಂಧಿಸಿದಂತೆ 17 ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

Write A Comment