ಸೇಲಂ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ತಮಿಳುನಾಡಿನ ಡಿಎಂಕೆ ಪಕ್ಷದ 200 ಕಾರ್ಯಕರ್ತರು ಹಾಗೂ ನಾಲ್ವರು ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಆಯೋಗದಿಂದ ಅನುಮತಿ ಪಡೆಯದೇ ಗುಂಪುಗಳಲ್ಲಿ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಕಿರಿಕಿರಿ ಉಂಟುಮಾಡಿದ್ದಾಗಿ ಡಿಎಂಕೆ ಪಕ್ಷದ 200 ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಏ.15 ರಂದು ಡಿಎಂಕೆ ಮಾಜಿ ಸಚಿವ ದಿವಂಗತ ವೀರಪಾಂಡಿ ಅರುಮುಗಮ್ ಅವರ ಪರವಾಗಿ ಘೋಷಣೆ ಕೂಗಿದ್ದಕ್ಕೆ ಡಿಎಂಕೆ ಪಕ್ಷದ ಕಾರ್ಯಕರ್ತರ ಎರಡು ಬಣಗಳ ನಡುವೆ ವಾಗ್ವಾದ ನಡೆದಿತ್ತು.
ಮೇ.16 ರಂದು ನಡೆಯಲಿರುವ ಚುನಾವಣೆಗಾಗಿ ಡಿಎಂಕೆ ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಪ್ರಚಾರದ ವೇಳೆ ಡಿಎಂಕೆ ಕಾರ್ಯಕರ್ತರು ಮಾಜಿ ಸಚಿವ ಆರುಮುಗಮ್ ಪರವಾಗಿ ಘೋಷಣೆ ಕೂಗಲು ಪ್ರಾರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಎರಡು ಬಣಗಳ ನಡುವೆ ಘರ್ಷಣೆ ಉಂಟಾಗಿತ್ತು. ಸಾರ್ವಜನಿಕ ಪ್ರದೇಶದಲ್ಲಿ ಘರ್ಷಣೆಗೆ ಕಾರಣವಾಗಿದ್ದ 200 ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ಧ ಈಗ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ