ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾದಲ್ಲಿ ನಿರ್ಮಿಸಿರುವ ಶ್ರೀ ಮಾತಾ ವೈಷ್ಣೋದೇವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದರು.
ವೈಷ್ಣೋದೇವಿ ದೇವಾಲಯವು ಸುಮಾರು 300 ಕೋಟಿ ರೂ. ವೆಚ್ಚದಲ್ಲಿ 230 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಿದೆ.
ಉದ್ಘಾಟನಾ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಎನ್.ಎನ್.ವೋಹ್ರಾ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಜಮ್ಮು ಮತ್ತು ಕಾಶ್ಮೀರದ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.