ನವದೆಹಲಿ: ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ತೋರಿದ ಆಟಗಾರರಿಗೆ ಕೇಂದ್ರ ಸರ್ಕಾರ ನೀಡುವ ರಾಜೀವ್ ಗಾಂಧಿ ಖೇಲ್ ರತ್ನ ಹಾಗೂ ಅರ್ಜುನ ಪ್ರಶಸ್ತಿಗೆ ಬಿಸಿಸಿಐ ಇಬ್ಬರು ಕ್ರಿಕೆಟ್ ಆಟಗಾರರ ಹೆಸರನ್ನು ಶಿಫಾರಸು ಮಾಡಿದೆ.
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಸಹ ಆಟಗಾರ ಅಜಿಂಕ್ಯಾ ರಹಾನೆ ಹೆಸರನ್ನು ಬಿಸಿಸಿಐ ಶಿಫಾರಸು ಮಾಡಿಕೊಟ್ಟಿದೆ.
ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ವಿರಾಟ್ ಕೊಹ್ಲಿ ಹೆಸರು ಹಾಗೂ ಅರ್ಜುನ ಪ್ರಶಸ್ತಿಗೆ ಅಜಿಂಕ್ಯಾ ರಹಾನೆ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.