ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶೀಘ್ರವೇ ಕೇಂದ್ರ ಸಂಪುಟ ಪುನಾರಚನೆ ಕೈಗೊಳ್ಳಲಿದ್ದು, ಆರೋಗ್ಯ ಸಚಿವ ಜೆಪಿ ನಡ್ಡಾ, ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್, ಹಾಗೂ ಸಣ್ಣ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವ ಗಿರಿರಾಜ್ ಸಿಂಗ್ ಅವರನ್ನು ಸಂಪುಟದಿಂದ ಕೈ ಬಿಡುವ ಸಾಧ್ಯತೆಯಿದೆ.
ಕೇಂದ್ರ ಸಂಪುಟ ಪುನಾರಚನೆ ಮುಂಬರುವ ವಿಧಾನ ಸಭೆ ಚುನಾವಣೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅಸ್ಸಾಂ, ವಿಧಾನಸಭೆ ಚುನಾವಣೆ ಸಂಬಂಧ ಗುರುವಾರ ಅಧಿಕೃತ ಆದೇಶ ಹೊರಡಲಿದೆ. ಜೊತೆಗೆ ಕೇರಳ, ತಮಿಳು ನಾಡು, ಪುದುಚೆರಿ, ಪಶ್ಚಿಮ ಬಂಗಾಳ ರಾಜ್ಯಗಳಿಗೆ ನಡೆದ ಚುನಾವಣಾ ಫಲಿತಾಂಶ ಕೂಡ ನಾಳೆಯೇ ಹೊರಬೀಳಲಿದೆ.
ಅಸ್ಸಾಂ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಮೂವರು ಸಚಿವರನ್ನು ಸಂಪುಟದಿಂದ ಕೈಬಿಟ್ಟು, ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರಧಾನಿ ಸೂಚಿದ್ದಾರೆ ಎಂದು ಮೂಲಗಳು ತಿಳಿಸಿವೆ.
Comments are closed.