ನವದೆಹಲಿ (ಪಿಟಿಐ): ನೀಟ್ ಸುಗ್ರೀವಾಜ್ಞೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಕೇಂದ್ರ ಸರ್ಕಾರ ಮೇ 24 ರಂದು ಹೊರಡಿಸಿದ್ದ ಸುಗ್ರೀವಾಜ್ಞೆಗೆ ತಡೆ ನೀಡಬೇಕು ಎಂದು ಕೋರಿ ಆನಂದ್ ರಾಯ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ನೀಟ್ ಸುಗ್ರೀವಾಜ್ಞೆಗೆ ಸಂಬಂಧಪಟ್ಟಂತೆ ಮಧ್ಯಂತರ ಆದೇಶ ಹೊರಡಿಸಿದರೆ ಸಾಕಷ್ಟು ಗೊಂದಲ ಉಂಟಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ನ ರಜಾ ಕಾಲದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.
Comments are closed.