ನವದೆಹಲಿ (ಪಿಟಿಐ): ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ ಮತ್ತು ವಿಜಯ್ ಮಲ್ಯ ಅವರು ವಿವಿಧ ಬ್ಯಾಂಕುಗಳಿಗೆ ಸಾಲ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳ ತನಿಖೆಗೆ ಸಿಬಿಐ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.
ಗುಜರಾತ್ ಕೇಡರ್‌ನ 1984ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ರಾಕೇಶ್ ಅಸ್ಥಾನ ಅವರು ಎಸ್‌ಐಟಿಯ ನೇತೃತ್ವ ವಹಿಲಸಿದ್ದಾರೆ. ಅವರು ಸಿಬಿಐನ ಹೆಚ್ಚುವರಿ ನಿರ್ದೇಶಕರಾಗಿದ್ದಾರೆ.
ರಾಕೇಶ್ ಅವರು ಗೋಧ್ರಾ ಹತ್ಯಾಕಾಂಡದ ತನಿಖೆಗಾಗಿ ರಚಿಸಲಾಗಿದ್ದ ಎಸ್‌ಐಟಿಯ ಮುಖ್ಯಸ್ಥರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರ ವಿರುದ್ಧ ಕೇಳಿ ಬಂದಿರುವ ಅಗಸ್ಟಾವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ ಮತ್ತು ವಿಜಯ್ ಮಲ್ಯ ಅವರು ದೇಶದ 17 ಬ್ಯಾಂಕುಗಳಿಗೆ ₹ 9 ಸಾವಿರ ಕೋಟಿ ಸಾಲ ಬಾಕಿ ಉಳಿಸಿಕೊಂಡಿರುವ ಪ್ರಕರಣದ ತನಿಖೆಯನ್ನು ಎಸ್‌ಐಟಿ ಮಾಡಲಿದೆ.
Comments are closed.