ರಾಷ್ಟ್ರೀಯ

ಆಂಧ್ರಪ್ರದೇಶದಲ್ಲಿ ರಸ್ತೆ ಅಪಘಾತ: ಒಂದೇ ಕುಟುಂಬದ 6 ಮಂದಿ ದುರ್ಮರಣ

Pinterest LinkedIn Tumblr

accident-logo

ಗುಂಟೂರು: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮೇದರಮಟ್ಲ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ.

ಆಂಧ್ರಪ್ರದೇಶದಿಂದ ಗುಂಟೂರಿಗೆ ಕಾರಿನಲ್ಲಿ ವೀರಸ್ವಾಮಿ ಮತ್ತವರ ಕುಟುಂಬದವರು ಹೋಗುತ್ತಿದ್ದರು. ರಸ್ತೆ ಬದಿ ಕಾರು ನಿಲ್ಲಿಸಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮಕ್ಕಳು ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತವಾದ ಸ್ಥಳದಲ್ಲಿ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Comments are closed.