ಇಟಾ ನಗರ (ಪಿಟಿಐ): ಅರುಣಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
ಉಪ ಮುಖ್ಯಮಂತ್ರಿಯಾಗಿ ಚೌನಾ ಮೇನ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಇಬ್ಬರಿಗೂ ರಾಜ್ಯಪಾಲ ತಥಾಗತ ರಾಯ್ ಅವರು ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಮಾಜಿ ಮುಖ್ಯಮಂತ್ರಿ ದೋರ್‌ಜೀ ಖಂಡು ಅವರ ಪುತ್ರ ಪೆಮಾ ಖಂಡು (37), ಅತ್ಯಂತ ಕಿರಿಯ ಮುಖ್ಯಮಂತ್ರಿ ಎನಿಸಿದ್ದಾರೆ.
Comments are closed.