ರಾಷ್ಟ್ರೀಯ

ಮಧ್ಯಪ್ರದೇಶ ಪ್ರವಾಹ: 35 ಮಂದಿ ಸಾವು, 9 ಮಂದಿ ನಾಪತ್ತೆ

Pinterest LinkedIn Tumblr

PTI-madhya-pradesh-floodsಭೋಪಾಲ್: ಮಧ್ಯಪ್ರದೇಶದಲ್ಲಿ ಕಳೆದೆರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತೆಯೇ ಪ್ರವಾಹದಿಂದಾಗಿ ಈವರೆಗೆ 35 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಪ್ರವಾಹದಿಂದಾಗಿ ಕಳೆದ 2 ವಾರಗಳಿಂದ ಒಟ್ಟು 9 ಮಂದಿ ನಾಪತ್ತೆಯಾಗಿದ್ದು, ನಾಪತ್ತೆಯಾದವರೆಲ್ಲರೂ ಮಳೆ ನೀರಿನಲ್ಲಿ ಕೊಚ್ಚಿ ಕೊಂಡು ಹೋಗಿರಬಹುದು ಎಂದು ಶಂಕಿಸಲಾಗುತ್ತಿದೆ. ಸತತ ಮಳೆಯಿಂದಾಗಿ ಮಧ್ಯ ಪ್ರದೇಶದ 53 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, 2500ಕ್ಕೂ ಹೆಚ್ಚು ಮನೆಗಳು ಕುಸಿದಿವೆ ಎಂದು ತಿಳಿದುಬಂದಿದೆ. 33 ಜಿಲ್ಲೆಗಳಲ್ಲಿ ಕಳೆದರೆಡು ದಿನದಿಂದ ಸರಾಸರಿ ಪ್ರಮಾಣಕ್ಕಿಂತಲೂ ಹೆಚ್ಚಿನ ಮಳೆಯಾಗುತ್ತಿದ್ದು, 14 ಜಿಲ್ಲೆಗಳಲ್ಲಿ ಸಾಮಾನ್ಯ ಸರಾಸರಿಯಂತೆ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಮಳೆ ಮತ್ತು ಪ್ರವಾಹದಿಂದಾಗಿ ಮನೆ, ಆಸ್ತಿಪಾಸ್ತಿಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಸುಮಾರು 3 ಲಕ್ಷ ನಿರಾಶ್ರಿತರಿಗಾಗಿ 27 ತಾತ್ಕಾಲಿಕ ಶಿಬಿರಗಳನ್ನು ತೆರೆಯಲಾಗಿದ್ದು, ಇಲ್ಲಿ ಈಗಾಗಲೇ ಸುಮಾರು 8 ಸಾವಿರ ಮಂದಿ ನಿರಾಶ್ರಿತರು ಆಶ್ರಯ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments are closed.