ತಿರುಪತಿ: ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದು, ನಾಳೆಯಿಂದ ಅಂಗಪ್ರದಕ್ಷಿಣಂ(ಉರುಳು ಸೇವೆ) ಮಾಡಲು ಭಕ್ತರು ಆಧಾರ್ ಕಾರ್ಡ್ ಅನ್ನು ಗುರುತಿನ ಚೀಟಿಯಾಗಿ ಕಡ್ಡಾಯವಾಗಿ ನೀಡಬೇಕು ಎಂದು ಹೇಳಿದೆ.
ಉರುಳು ಸೇವೆ ಮಾಡುವ ಭಕ್ತರಿಗೆ ಜುಲೈ 20ರಿಂದ ಆಧಾರ್ ಕಾರ್ಡ್ ಕಡ್ಡಾಯಗೊಳಿಸಲು ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ದೇವಸ್ಥಾನದ ಸಾರ್ವಜನಿಕ ಸಂಪರ್ಕ ಅಧಿಕಾರಿ ತಲರಿ ರವಿ ಅವರು ಹೇಳಿದ್ದಾರೆ.
ಭದ್ರತೆಯ ದೃಷ್ಟಿಯಿಂದ ಹಾಗೂ ಭಕ್ತರು ಪದೇಪದೆ ಉರುಳು ಸೇವೆ ಮಾಡುವುದನ್ನು ತಪ್ಪಿಸಲು ಮತ್ತು ಬೇರೆಯವರಿಗೆ ಅವಕಾಶ ನೀಡುವ ಉದ್ದೇಶದಿಂದ ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Comments are closed.