ರಾಷ್ಟ್ರೀಯ

ಸಾಮಾಜಿಕ ಜಾಲತಾಣ ಬಳಕೆಗೆ ಸರ್ಕಾರಿ ಅಧಿಕಾರಿಗಳಿಗೆ ಶೀಘ್ರವೇ ಅನುಮತಿ: ಆದರೆ ಸರ್ಕಾರವನ್ನು ಟೀಕಿಸುವಂತಿಲ್ಲ!

Pinterest LinkedIn Tumblr

fb-1ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಕ್ತ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಸಕ್ರಿಯರಾಗಲು ಸರ್ಕಾರಿ ಅಧಿಕಾರಿಗಳಿಗೆ ಶೀಘ್ರವೇ ಅನುಮತಿ ನೀಡಲಾಗುತ್ತದೆ. ಆದರೆ ಸರ್ಕಾರದ ವಿರುದ್ಧ ಮಾತನಾಡಬಾರದೆಂಬ ಷರತ್ತನ್ನು ವಿಧಿಸಲಾಗಿದೆ.

ಈಗಿನ ನಿಯಮಗಳ ಪ್ರಕಾರ ಸರ್ಕಾರದಿಂದ ಅನುಮತಿ ಪಡೆದ ನಂತರ ಸರ್ಕಾರಿ ಅಧಿಕಾರಿಗಳು ಸಾಮಾಜಿಕ ಜಾಲತಾಣ ಸೇರಿದಂತೆ ಇನ್ನಿತರ ರೀತಿಯಲ್ಲಿ ಸಾರ್ವಜನಿಕ ಹೇಳಿಕೆ ನೀಡುವುದಕ್ಕೆ ಅವಕಾಶವಿದೆ. ಆದರೆ ಕೇಂದ್ರ ಸರ್ಕಾರ ಅಖಿಲ ಭಾರತ ಸೇವಾ (ನಡತೆ) ನಿಯಮಗಳನ್ನು ಬದಲಾವಣೆ ಮಾಡಲು ಮುಂದಾಗಿದೆ. ತಿದ್ದುಪಡಿ ನಿಯಮಗಳು ಜಾರಿಯಾದಲ್ಲಿ ಸಾಮಾಜಿಕ ಜಾಲತಾಣ, ಸಾರ್ವಜನಿಕ ಹೇಳಿಕೆ,

ಪುಸ್ತಕ ಬಿಡುಗಡೆ, ಮಾಧ್ಯಮ ಸಂವಹನಗಳಲ್ಲಿ ಭಾಗವಹಿಸುವುದಕ್ಕೂ ಮುನ್ನ ಸರ್ಕಾರದಿಂದ ಅನುಮತಿ ಪಡೆಯುವ ಅವಶ್ಯಕತೆ ಇರುವುದಿಲ್ಲ. ಅಂತೆಯೇ ಸರ್ಕಾರದ ವಿರುದ್ಧವಾಗಿ ಅಥವಾ ಸರ್ಕಾರದ ಯೋಜನೆಗಳಿಗೆ ಮುಜುಗರ ಉಂಟು ಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ನೀಡುವಂತಿಲ್ಲ ಎಂಬ ನಿರ್ಬಂಧವನ್ನು ಪ್ರಸ್ತಾವಿತ ಕಾನೂನಿನಲ್ಲಿ ಸೇರಿಸಲಾಗಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳನ್ನು ಹಾಕುವುದರ ಮೂಲಕ ಸಂಕಷ್ಟಕ್ಕೀಡಾಗಿದ್ದರು.

Comments are closed.