ರಾಷ್ಟ್ರೀಯ

ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆಯರಿಗೆ 3 ತಿಂಗಳು ರಜೆ

Pinterest LinkedIn Tumblr

rape-2ನವದೆಹಲಿ: ಲೈಂಗಿಕ ಕಿರುಕುಳಕ್ಕೆ ಒಳಗಾಗುವ ಮಹಿಳಾ ಉದ್ಯೋಗಿಗಳು ತನಿಖೆಯ ಅವಧಿಯಲ್ಲಿ ಮೂರು ತಿಂಗಳ ಕಾಲ ರಜೆ ಪಡೆದುಕೊಳ್ಳಬಹುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ.

ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರೆತ ಹಾಗೂ ಪಿಂಚಣಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು, ದಾಖಲಾಗುವ ಲೈಂಗಿಕ ಕಿರುಕುಳ ಪ್ರಕರಣಗಳ ಸಂಖ್ಯೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ಕೇಂದ್ರೀಕೃತ ಡಾಟಾವನ್ನು ನಿರ್ವಹಣೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಮಹಿಳೆಯರಿಗೆ ಕೆಲಸ ಮಾಡುವ ಸ್ಥಳದಲ್ಲಿ ಲೈಂಗಿಕ ಕಿರುಕುಳ ಕಾಯ್ದೆ 2013ರ ಸೆಕ್ಷೆನ್ 12ರಡಿ ಲೈಂಗಿಕ ಕಿರುಕುಳಕ್ಕೆ ಒಳಗಾಗುವ ಮಹಿಳೆಯರು ತನಿಖೆಯ ಅವಧಿಯಲ್ಲಿ ಮೂರು ತಿಂಗಳವರೆಗೆ ರಜಾ ಪಡೆದುಕೊಳ್ಳಲು ಅವಕಾಶ ಇದೆ ಎಂದು ತಿಳಿಸಿದರು.

ಪ್ರಕರಣ ದಾಖಲಾದ ನಂತರ ಸ್ಥಳೀಯ ಸಮಿತಿ ಅಥವಾ ಆಂತರಿಕ ಸಮಿತಿ ನೀಡುವ ಶಿಫಾರಸಿನ ಆಧಾರದ ಮೇಲೆ ರಜೆಗಾಗಿ ಲಿಖಿತ ಮನವಿ ಸಲ್ಲಿಸಿದರೆ ಮೇಲಾಧಿಕಾರಿಗಳು ರಜೆಗೆ ಅನುಮತಿ ನೀಡುತ್ತಾರೆ ಎಂದು ಸಿಂಗ್ ಹೇಳಿದ್ದಾರೆ.

Comments are closed.