ರಾಷ್ಟ್ರೀಯ

ಕಾಶ್ಮೀರ ವಿಷಯವಾಗಿ ಪಾಕ್‌ ಜತೆ ಚರ್ಚಿಸುವ ಪ್ರಶ್ನೆಯೇ ಇಲ್ಲ: ಭಾರತ

Pinterest LinkedIn Tumblr

inನವದೆಹಲಿ (ಪಿಟಿಐ): ಪಾಕಿಸ್ತಾನದ ಜತೆ ಭಯೋತ್ಪಾದನೆ ವಿಷಯವಾಗಿ ಮಾತ್ರ ಚರ್ಚಿಸಲು ಭಾರತ ಸಿದ್ಧವಿದ್ದು ಕಾಶ್ಮೀರ ವಿಚಾರವಾಗಿ ಚರ್ಚಿಸುವ ಪ್ರಶ್ನೆಯೇ ಇಲ್ಲ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್‌ ಜೈಶಂಕರ್‌ ಬುಧವಾರ ತಿಳಿಸಿದ್ದಾರೆ.

ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದಲ್ಲಿ ಕಾಶ್ಮೀರ ವಿಷಯವನ್ನು ಚರ್ಚಿಸಲು ಪಾಕಿಸ್ತಾನ ಆಹ್ವಾನ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ವಿದೇಶಾಂಗ ಕಾರ್ಯದರ್ಶಿಗಳು ಕಾಶ್ಮೀರ ವಿಷಯವನ್ನು ಚರ್ಚಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪಾಕಿಸ್ತಾನದ ಬಲೂಚಿಸ್ತಾನ ಸ್ವಾತಂತ್ರ್ಯದ ಬಗ್ಗೆ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಕಾಶ್ಮೀರ ವಿಷಯವಾಗಿ ಚರ್ಚಿಸಲು ಭಾರತಕ್ಕೆ ಆಮಂತ್ರಣ ನೀಡಿತ್ತು.

Comments are closed.