ಹೈದರಾಬಾದ್: ಭೋಪಾಲ್ ಕೇಂದ್ರೀಯ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದ ಉಗ್ರರು ಪೋಲೀಸರ ಗುಂಡೇಟಿಗೆ ಬಲಿಯಾಗಿರುವ ಪ್ರಕಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಂಐಎಂ ಮುಖಂಡ ಅಸಾವುದ್ದೀನ್ ಓವೈಸಿ, ಉಗ್ರರು ತಪ್ಪಿಸಿಕೊಂಡಿರುವ ಹಾಗೂ ಎನ್ ಕೌಂಟರ್ ಮಾಡಿರುವ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶಾರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಗೃಹ ಸಚಿವರು ಹಾಗೂ ಪೊಲೀಸರು ನೀಡುತ್ತಿರುವ ಮಾಹಿತಿ ನಂಬಲು ಸಾಧ್ಯವಿಲ್ಲ ಆದ್ದರಿಂದ ಈ ಪ್ರಕರಣದ ಬಗ್ಗೆ ಸತ್ಯ ಅಂಶವನ್ನು ತಿಳಿಯಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ವಿಚಾರಣೆ ನಡೆಸಬೇಕು ಎಂದು ಅಸಾವುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ.
ಉಗ್ರರು ಜೈಲಿನಿಂದ ತಪ್ಪಿಸಿಕೊಂಡಿರುವುದು ಹಾಗೂ ಎನ್ ಕೌಂಟರ್ ಗೆ ಬಲಿಯಾಗಿರುವ ಇಡೀ ಪ್ರಕರಣ ಅಚ್ಚರಿ ಹಾಗೂ ಅಘಾತಕಾರಿಯಾಗಿದೆ ಎಂದು ಓವೈಸಿ ಹೇಳಿದ್ದಾರೆ. ವಿಚಾರಣೆ ಎದುರಿಸುತ್ತಿದ್ದವರನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಆದ್ದರಿಂದ ನ್ಯಾಯಾಂಗ ತನಿಖೆ ಅಗತ್ಯ ಎಂದು ಓವೈಸಿ ಅಭಿಪ್ರಾಯಪಟ್ಟಿದ್ದಾರೆ.
ರಾಷ್ಟ್ರೀಯ
Comments are closed.