ಚೆನ್ನೈ: ನಿನ್ನೆ ವಿಧಿವಶರಾದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಂತಿಮ ದರ್ಶನ ಪಡೆಯಲು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬರುವುದು ಪಕ್ಕಾ ಆಗಿತ್ತು. ಆದರೆ ಬಂದ ಹಾದಿಯಲ್ಲೇ ಮರಳಿದ್ದಾರೆ.
ಕಾರಣ, ಅವರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನಲೆಯಲ್ಲಿ ರಾಷ್ಟ್ರಪತಿಗಳು ಮರಳಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಹೀಗಾಗಿ ಅವರು ಜಯಲಲಿತಾ ಅಂತಿಮ ದರ್ಶನಕ್ಕೆ ಬರಲಿಲ್ಲ.
ಆದರೆ ಪ್ರಧಾನಿ ನರೇಂದ್ರ ಮೋದಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ರಾಜಕೀಯ ಗಣ್ಯರು ಜಯಲಲಿತಾ ಅಂತಿಮ ದರ್ಶನ ಪಡೆದರು.
Comments are closed.