ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ನಿನ್ನೆ ರಾತ್ರಿ ವಿಧಿವಶರಾಗಿದ್ದು, ತಮಿಳುನಾಡು ಇತಿಹಾಸದಲ್ಲಿ ಅಧಿಕಾರದಲ್ಲಿದ್ದಾಗಲೇ ನಿಧನರಾದ ಮೂರನೇ ಮುಖ್ಯಮಂತ್ರಿಯಾಗಿದ್ದಾರೆ.
ರಾಜಕೀಯ ಗುರು ಮಾಜಿ ಮುಖ್ಯಮಂತ್ರಿ ಎಂಜಿ ರಾಮಚಂದ್ರನ್ ಅವರು ಸಹ ಅಧಿಕಾರಿದಲ್ಲಿದ್ದಾಗಲೇ ನಿಧನರಾಗಿದ್ದರು. ಇದಕ್ಕೂ ಮುನ್ನ ಎಂಜಿಆರ್ ಅವರ ಬದ್ಧ ರಾಜಕೀಯ ವೈರಿಯಾಗಿದ್ದ ಡಿಎಂಕೆಯ ಸಂಸ್ಥಾಪಕ ಸಿಎನ್ ಅಣ್ಣದೊರೈ ಸಹ ಅಧಿಕಾರದಲ್ಲಿದ್ದಾಗಲೇ ವಿಧಿವಶರಾಗಿದ್ದರು.
ಇದೇ ವರ್ಷದ ಆದಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಮಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯದ್ ಅವರು ಕೊನೆಯುಸಿರೆಳೆದಿದ್ದು 2016ರ ಅಂತ್ಯದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಇಹಲೋಕ ತ್ಯಜಿಸಿದ್ದಾರೆ.
Comments are closed.