ಚೆನ್ನೈ: ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಸುಧಾರಿಸುತ್ತಿದ್ದು, ಆಂಟಿಬಯೊಟಿಕ್ ಔಷಧ ಸೇವನೆಯ ಅವಧಿ ಮುಗಿದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕರುಣಾನಿಧಿಯವರು ಚಿಕಿತ್ಸೆ ಪಡೆಯುತ್ತಿರುವ ಕಾವೇರಿ ಆಸ್ಪತ್ರೆ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದೆ.
ಪೌಷ್ಟಿಕಾಂಶ ಕೊರತೆ, ನಿರ್ಜಲೀಕರಣ, ಶ್ವಾಸಕೋಶ ಸೋಂಕು ಮತ್ತು ಉಸಿರಾಟದ ತೊಂದರೆಯಿಂದ ಕರುಣಾನಿಧಿಯವರು ಆಸ್ಪತ್ರೆಗೆ ದಾಖಲಾಗಿದ್ದರು.ಕಳೆದ ಮೂರು ವಾರಗಳಲ್ಲಿ ಅವರು ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದು ಎರಡನೇ ಸಲ.
ರಾಷ್ಟ್ರೀಯ
Comments are closed.