ಚೆನ್ನೈ: ತಮಿಳುನಾಡಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದ್ದು ಮಹತ್ವದ ಬೆಳವಣಿಗೆಯೊಂದಲ್ಲಿ ಇ.ಕೆ.ಪಳನಿಸ್ವಾಮಿ ಅವರನ್ನು ಶಾಸಕಾಂಗ ಪಕ್ಷದ (ಎಐಎಡಿಎಂಕೆ) ನಾಯಕರಾಗಿ ಆಯ್ಕೆ ಮಾಡಲಾಗಿದೆ.
ಹಂಗಾಮಿ ಮುಖ್ಯಮಂತ್ರಿಯಾಗಿರುವ ಪನ್ನೀರ್ ಸೆಲ್ವಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಪನ್ನೀರ್ ಸೆಲ್ವಂ ಅವರಿಗೆ ಮತ್ತೆ ಮುಖ್ಯಮಂತ್ರಿ ಪಟ್ಟ ದೊರೆಯಬಾರದು ಎಂಬ ಮಾಸ್ಟರ್ ಪ್ಲಾನ್ ರೂಪಿಸಿರುವ ಶಶಿಕಲಾ ತಮ್ಮ ಆಪ್ತ ಇ.ಕೆ.ಪಳನಿಸ್ವಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ.
ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರನ್ನು ಅಪರಾಧಿ ಎಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಾಗುವ ಅವಕಾಶ ಕೈತಪ್ಪಿದಂತಾಗಿದೆ.
ಸುಪ್ರೀಂ ಕೋರ್ಟ್ ತೀರ್ಪು ಪ್ರಕಟವಾದ ನಂತರ ಬೆಂಬಲಿಗ ಶಾಸಕರೊಂದಿಗೆ ಸಭೆ ನಡೆಸಿ ಪಳನಿ ಸ್ವಾಮಿ ಅವರನ್ನು ಆಯ್ಕೆ ಮಾಡಿದ್ದಾರೆ.
Comments are closed.