ರಾಷ್ಟ್ರೀಯ

ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರ ಇಳಿಕೆಗೆ ಕೇಂದ್ರ ಸರ್ಕಾರ ನಿರ್ಧಾರ

Pinterest LinkedIn Tumblr

ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಕಾರ್ಯದರ್ಶಿ ಯದುವೀರ್ ಸಿಂಗ್ ಮಲಿಕ್, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಇಳಿಕೆ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ದಕ್ಷ ಸಾರಿಗೆ ನಿರ್ವಹಣಾ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ.

ಪ್ರಯಾಣಿಕರು ಸಂಚರಿಸಿದ ದೂರಕ್ಕೆ ಅನುಗುಣವಾಗಿ ಟೋಲ್ ವಿಧಿಸಲು ಚಿಂತನೆ ನಡೆಸಿದೆ. ಸಾಮಾನ್ಯ ಟೋಲ್ ವಿಧಿಸುವ ಬದಲು ಈ ರೀತಿ ಮಾಡಿದ್ರೆ ಪ್ರಯಾಣಿಕರಿಗೆ ಹಣ ಉಳಿತಾಯವಾಗಲಿದೆ. ಸದ್ಯ ಈ ಯೋಜನೆಗೆ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ.

ಇನ್ನೊಂದು ವರ್ಷದೊಳಗೆ ಹೊಸ ನಿಯಮ ಜಾರಿಗೆ ಬರುವ ನಿರೀಕ್ಷೆಯಿದೆ. ಅಮೆರಿಕ, ಆಸ್ಟ್ರೇಲಿಯಾದಂತಹ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಈಗಾಗ್ಲೇ ಎಲೆಕ್ಟ್ರಾನಿಕ್ ಟೋಲಿಂಗ್ ವ್ಯವಸ್ಥೆ ಜಾರಿಲ್ಲಿದೆ. ಅದನ್ನೇ ಭಾರತದಲ್ಲೂ ಅಳವಡಿಸುವುದು ಸರ್ಕಾರದ ಉದ್ದೇಶ. ಮೊದಲು ಸೂರತ್ ನಿಂದ ಪ್ರಾಯೋಗಿಕವಾಗಿ ಇದನ್ನು ಅಳವಡಿಸಲಾಗುತ್ತದೆ.

Comments are closed.