ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕಾರ ಸ್ವೀಕರಿಸಿದ್ದು ರಾಹುಲ್ ಕಾಂಗ್ರೆಸ್ ಅಧ್ಯಕ್ಷರಾಗಲು ಅತ್ಯಂತ ಯೋಗ ವ್ಯಕ್ತಿ ಎಂದು ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಅಭಿನಂದಿಸಿದ್ದರು.
ಭಾರತದ ಅತ್ಯಂತ ಹಳೆಯ ಮತ್ತು ಗೌರವಾನ್ವಿತ ಪಕ್ಷದ ಅಧ್ಯಕ್ಷರಾಗಲು ರಾಹುಲ್ ಗಾಂಧಿ ಅರ್ಹ ವ್ಯಕ್ತಿ. ಎಲ್ಲರಂತೆ ನಾನು ಸಹ ಅವರನ್ನು ನಿಜವಾದ ರಾಷ್ಟ್ರೀಯ ಉತ್ಸಾಹದಲ್ಲಿ ಅಭಿನಂದಿಸುತ್ತೇವೆ. ಪ್ರಜಾಪ್ರಭುತ್ವದ ಕುರಿತು ಹೆಚ್ಚಿನ ಆಸಕ್ತಿಯಲ್ಲಿ ಹೊಂದಿರುವ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಇನ್ನು ಸುದೀರ್ಘವಾಗಿ ಬೆಳೆಯಲಿ…ಜೈ ಹಿಂದ್! “ಎಂದು ಟ್ವೀಟಿಸಿದ್ದರು. ಇದಕ್ಕೆ ರೀ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ನಿಮ್ಮ ಈ ರೀತಿಯ ಮಾತುಗಳಿಗೆ ಧನ್ಯವಾದಗಳು ಶತ್ರುಘ್ನ ಸಿನ್ಹಾ ಜೀ ಎಂದು ಟ್ವೀಟಿಸಿದ್ದಾರೆ.
ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಅವರು ಇತ್ತೀಚೆಗೆ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂದು ಪ್ರಧಾನಿ ಹೇಳಿಕೆಗೆ ಸಿನ್ಹಾ ಆಕ್ಷೇಪ ವ್ಯಕ್ತಪಡಿಸಿದ್ದರು.
ದೆಹಲಿಯ ಅಕ್ಬರ್ ರೋಡ್‌ನಲ್ಲಿರುವ ಕಾಂಗ್ರೆಸ್ ಮುಖ್ಯ ಕಚೇರಿಯ ಹೊರಭಾಗದಲ್ಲಿ ನಿರ್ಮಾಣ ಮಾಡಲಾಗಿರುವ ವಿಶೇಷ ವೇದಿಕೆಯಲ್ಲಿ ನಿರ್ಗಮಿತ ಅಧ್ಯಕ್ಷೆ ರಾಹುಲ್ ಅವರ ತಾಯಿ ಸೋನಿಯಾ ಗಾಂಧಿ ಅವರು, ರಾಹುಲ್ ಗಾಂಧಿಗೆ ಅಧಿಕಾರ ಹಸ್ತಾಂತರಿಸಿದರು. ಆ ಮೂಲಕ ರಾಹುಲ್ ಗಾಂಧಿ ಎಐಸಿಸಿ ಸಾರಥ್ಯ ವಹಿಸಿಕೊಂಡ 6ನೇ ವ್ಯಕ್ತಿಯಾಗಿದ್ದಾರೆ.
Comments are closed.