ಚೆನ್ನೈ: ತಮಿಳು ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರು ತಮಿಳುನಾಡಿನಲ್ಲಿ ಹೊಸ ವರ್ಷಕ್ಕೆ ಹೊಸ ಪಕ್ಷವನ್ನು ಸ್ಥಾಪಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಪಕ್ಷ ಘೋಷಣೆಗೆ ಮುನ್ನ ಡಿಸೆಂಬರ್ 26ರಿಂದ ಡಿ.30ರವರೆಗೆ ತನ್ನ ಅಭಿಮಾನಿಗಳನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಡಿಸೆಂಬರ್ 31ರಂದು ಹೊಸ ಪಕ್ಷವನ್ನು ಘೋಷಿಸಲಿದ್ದಾರೆ ಎಂದು ವರದಿ ವಿವರಿಸಿದೆ.
ನಟ ರಜನಿಕಾಂತ್ ಅವರು ರಾಜಕೀಯಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಈಗಾಗಲೇ ತಿಳಿದಿದ್ದು, ಏತನ್ಮಧ್ಯೆ ತಮ್ಮ ಅಭಿಮಾನಿಗಳ ಜತೆ ಒಂದು ಸುತ್ತಿನ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಅಲ್ಲದೇ ಇದೀಗ ಡಿಸೆಂಬರ್ 26ರಿಂದ 5 ದಿನಗಳ ಕಾಲ ಅಭಿಮಾನಿಗಳನ್ನು ಭೇಟಿಯಾಗಿ, ಚರ್ಚಿಸಿ ಹೊಸ ವರ್ಷಾರಂಭದಲ್ಲಿಯೇ ಹೊಸ ಪಕ್ಷವನ್ನು ಘೋಷಿಸಲಿದ್ದಾರೆ ಎಂದು ವರದಿ ತಿಳಿಸಿದೆ.
Comments are closed.