ಭೋಪಾಲ್: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಹಿನ್ನೆಲೆಯಲ್ಲಿ ನಡೆದ ವೈದ್ಯಕೀಯ ಪರೀಕ್ಷೆ ವೇಳೆ ಹುದ್ದೆ ಆಕಾಂಕ್ಷಿಗಳ ಎದೆಯ ಮೇಲೆ ಎಸ್ಸಿ, ಎಸ್ಟಿ ಜಾತಿ ಗುರುತು ಹಾಕಲಾಗಿದ್ದು ಈ ಘಟನೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಕಾನ್ಸ್ಟೇಬಲ್ ಹುದ್ದೆಗಾಗಿ ನೇಮಕಾತಿ ಪ್ರಕ್ರಿಯೆ ನಡೆಸಿದ್ದು ಈ ವೇಳೆ ಹಾಜರಾಗಿದ್ದ ಆಕಾಂಕ್ಷಿಗಳ ಎದೆಯ ಮೇಲೆ ಆತನ ಜಾತಿ(ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ)ಯನ್ನು ಗುರುತು ಹಾಕಲಾಗಿದೆ. ಈ ಕುರಿತ ಚಿತ್ರಗಳು ಹಲವು ಮಾಧ್ಯಮಗಳಲ್ಲಿ ಬಿತ್ತರಗೊಂಡಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಈ ಘಟನೆ ಕುರಿತು ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಪ್ರಕರಣ ಸಂಬಂಧ ಧಾರ್ ಪೊಲೀಸ್ ವರಿಷ್ಠಾಧಿಕಾರಿ ವೀರೇಂದ್ರ ಸಿಂಗ್ ಅವರು ತನಿಖೆಗೆ ಆದೇಶಿಸಿದ್ದಾರೆ.
ನಿನ್ನೆ ಜಿಲ್ಲಾ ವೈದ್ಯಕೀಯ ಮಂಡಳಿ ಪೊಲೀಸ್ ಹುದ್ದೆ ಆಕಾಂಕ್ಷಿಗಳ ವೈದ್ಯಕೀಯ ಪರೀಕ್ಷೆಯನ್ನು ನಡೆಸಿತ್ತು.
Comments are closed.