ರಾಷ್ಟ್ರೀಯ

ಕೇಂದ್ರ ಮಾಜಿ ಸಚಿವ ಬಂಡಾರು ದತ್ತಾತ್ರೇಯ ಪುತ್ರ ನಿಧನ

Pinterest LinkedIn Tumblr

ಹೈದರಾಬಾದ್: ಮಾಜಿ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಅವರ ಪುತ್ರ ಬಿ. ವೈಷ್ಣವ್ (21) ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮಂಗಳವಾರ ರಾತ್ರಿ ಹೈದರಾಬಾದಿನ ರಾಮನಗರ ನಿವಾಸದಲ್ಲಿ ಕುಟುಂಬದವರ ಜತೆ ಊಟ ಮುಗಿಸಿದ ವೈಷ್ಣವ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 12.30ಕ್ಕೆ ಕೊನೆಯುಸಿರೆಳೆದಿದ್ದಾರೆ.

ವೈಷ್ಣವ್ ಅವರು ಮೆಡಿಸಿಟಿ ಮೆಡಿಕಲ್ ಕಾಲೇಜಿನಲ್ಲಿ ಮೂರನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. ಇವರು ಸಿಕಂದರಾಬಾದಿನಲ್ಲಿ ಬಿಜೆಪಿ ಪಕ್ಷದ ಕಾರ್ಯಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು.

Comments are closed.