ರಾಷ್ಟ್ರೀಯ

ಸರಕಾರ 4 ವರ್ಷಗಳನ್ನು ಪೂರೈಸಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು…?

Pinterest LinkedIn Tumblr

ನವದೆಹಲಿ: ಮೇ 26 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 4 ವರ್ಷಗಳನ್ನು ಪೂರೈಸಿದ್ದು, ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಟ್ವೀಟ್ ಮಾಡಿದ್ದಾರೆ.

ತಮ್ಮ ಸರ್ಕಾರ ಭಾರತದ ರೂಪಾಂತರಕ್ಕಾಗಿ ಹೇಗೆ ಕಾರ್ಯನಿರ್ವಹಣೆಯನ್ನು ಪ್ರಾರಂಭಿಸಿತು ಎನ್ನುವುದನ್ನು ನೆನಪಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ 2014 ರಲ್ಲಿ ಇದೇ ದಿನ ನಾವು ಭಾರತದ ಬದಲಾವಣೆಗಾಗಿ ಕಾರ್ಯಾರಂಭ ಮಾಡಿದ್ದೆವು. ಕಳೆದ 4 ವರ್ಷಗಳಲ್ಲಿ ಅಭಿವೃದ್ಧಿ ಎನ್ನುವುದು ಸಾಮೂಹಿಕ ಚಳುವಳಿಯಾಗಿ ಪರಿವರ್ತನೆಯಾಗಿದ್ದು, ಪ್ರತಿಯೊಬ್ಬ ನಾಗರಿಕನೂ ಇದರಲ್ಲಿ ಭಾಗಿಯಾಗಲು ಬಯಸುತ್ತಿದ್ದಾನೆ. 125 ಕೋಟಿ ಭಾರತೀಯರು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿದ್ದಾರೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸುತ್ತಿದೆ, ನಮಗೆ ಭಾರತವೇ ಮೊದಲು, ಭವಿಷ್ಯದ ದೃಷ್ಟಿಯಿಂದ ನಮ್ಮ ಸರ್ಕಾರ ಜನಸ್ನೇಹಿ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದು ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದು, ಜನರ ಬೆಂಬಲವೇ ನಮ್ಮ ಶಕ್ತಿ ಎಂದು ಟ್ವೀಟ್ ಮಾಡಿದ್ದಾರೆ.

Comments are closed.