ರಾಷ್ಟ್ರೀಯ

ಮಸೀದಿಗಳ ಧ್ವನಿವರ್ಧಕದಿಂದ ಶಬ್ದ ಮಾಲಿನ್ಯ: ಹಸಿರು ನ್ಯಾಯಮಂಡಳಿಗೆ ದೂರು

Pinterest LinkedIn Tumblr


ಹೊಸದಿಲ್ಲಿ: ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯಿಂದ ಶಬ್ದ ಮಾಲಿನ್ಯ ಉಂಟಾಗುತ್ತಿದ್ದು, ಇದಕ್ಕೆ ನಿರ್ಬಂಧ ಹೇರಬೇಕೆಂದು ಕೋರಿ ರಾಷ್ಟ್ರೀಯ ಹಸಿರ ನ್ಯಾಯ ಮಂಡಳಿಗೆ ದೂರು ಸಲ್ಲಿಸಲಾಗಿದೆ. ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ನ್ಯಾಯಮಂಡಳಿ, ಕೇಂದ್ರ ಮತ್ತು ದಿಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ನೋಟಿಸ್‌ ಜಾರಿ ಮಾಡಿದೆ. ಜೂನ್‌ 26ರ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಎನ್‌ಜಿಟಿ ಅಧ್ಯಕ್ಷ ಹಾಗೂ ನ್ಯಾ. ಜವಾದ್‌ ರಹೀಮ್‌ ನೇತೃತ್ವದ ನ್ಯಾಯಪೀಠ ಸೂಚಿಸಿದೆ.

ಮಸೀದಿಗಳಲ್ಲಿ ಅಕ್ರಮವಾಗಿ ಧ್ವನಿವರ್ಧಕಗಳ ಬಳಕೆಯಿಂದ ಅಕ್ಕಪಕ್ಕದ ನಿವಾಸಿಗಳು ಶಬ್ದಮಾಲಿನ್ಯ ಸಂಬಂಧಿತ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ದೂರಿ ಅಖಂಡ ಭಾರತ್‌ ಮೋರ್ಚಾ ಎಂಬ ಸರಕಾರೇತರ ಸೇವಾ ಸಂಸ್ಥೆ ಎನ್‌ಜಿಟಿಗೆ ಅರ್ಜಿ ಸಲ್ಲಿಸಿತ್ತು. ಶಾಲೆ, ಆಸ್ಪತ್ರೆ ಮುಂತಾದ ‘ನಿಶ್ಶಬ್ದ’ ವಾತಾವರಣ ಇರಬೇಕಾದ ಸ್ಥಳಗಳಲ್ಲಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

Comments are closed.