ನವದೆಹಲಿ: ಜಗ ಮೆಚ್ಚಿದ ನಾಯಕ, ಭಾರತ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರನ್ನು ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿರುವುದಾಗಿ ಸೋಮವಾರ ಮೂಲಗಳು ತಿಳಿಸಿವೆ.
ಬಹು ದಿನಗಳಿಂದ ವಾಜಪೇಯಿಯವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಅವರನ್ನು ದೆಹಲಿಯ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ದೈನಂದಿನ ತಪಾಸಣೆಗಾಗಿ ವಾಜಪೇಯಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಡಾ.ರಣ್’ದೀಪ್ ಗುಲಾರಿಯಾ ಅವರು ವಾಜಪೇಯಿಯವರ ಆರೋಗ್ಯದ ಬಗ್ಗೆ ನಿಗಾವಹಿಸಿದ್ದಾರೆಂದು ಹೇಳಲಾಗುತ್ತಿದೆ.
Comments are closed.