ಡೆಹರಾಡೂನ್: ಬಸ್ಸೊಂದು 700 ಅಡಿ ಆಳದ ಪ್ರಪಾತಕ್ಕೆ ಬಿದ್ದು 47 ಮಂದಿ ದಾರುಣವಾಗಿ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘೋರ ದುರಂತ ಉತ್ತರಾಖಂಡದ ಪೌರಿ ಘರ್ವಾಲ್ ಎಂಬಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಪ್ರಪಾತಕ್ಕೆ ಬಿದ್ದ ಬಸ್ 2 ಭಾಗಗಳಾಗಿದ್ದು , ಪುಡಿ ಪುಡಿಯಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ನಜ್ಜುಗುಜ್ಜಾದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.
ಸ್ಥಳಕ್ಕೆ ಎಸ್ಡಿಆರ್ಎಫ್ ರಕ್ಷಣಾ ತಂಡಗಳು, ಪೊಲೀಸರು ದೌಡಾಯಿಸಿದ್ದು , ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶವಗಳನ್ನು ಮೇಲಕ್ಕೆತ್ತುತ್ತಿದ್ದಾರೆ.
ಅಪಘಾತಕ್ಕೆ ನಿಖರ ಕಾರಣವೇನೆಂದು ಇದುವರೆಗೆ ತಿಳಿದು ಬಂದಿಲ್ಲ.
ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಎಲ್ಲಾ ಲಕ್ಷಣಗಳಿವೆ.
Comments are closed.